ಉತ್ತರ ಪ್ರದೇಶ: ಖಾಸಗಿ ಡಬಲ್ ಡೆಕ್ಕರ್ ಬಸ್‌ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಎಂಟು ಜನರು ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಉತ್ತರ ಪ್ರದೇಶ ಪೂರ್ವಾಂಚಲ ಎಕ್ಸ್ ಪ್ರೆಸ್ ವೇನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಬಿಹಾರದಿಂದ ದೆಹಲಿಗೆ ಎರಡೂ ಬಸ್‌ಗಳು ತೆರಳುತ್ತಿತ್ತು. ಈ ವೇಳೆ ಎದುರಿನಲ್ಲಿ ಹೋಗುತ್ತಿದ್ದ ಬಸ್ ಏಕಾಏಕಿ ನಿಲ್ಲಿಸಿದ್ದರಿಂದ ಹಿಂದಿನಿಂದ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ.
ಘಟನಾ ಸ್ಥಳಕ್ಕೆ ಬಾರಾಬಂಕಿ ಪೊಲೀಸರ ತಂಡ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಇನ್ನು ಸಿಎಂ ಯೋಗಿ ಆದಿತ್ಯನಾಥ್ ಘಟನೆ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.



