ಉಡುಪು ತಯಾರಿಕಾ ಘಟಕದಲ್ಲಿ ಅನಿಲ ಸೋರಿಕೆ: 87 ಮಹಿಳಾ ಕಾರ್ಮಿಕರು ಅಸ್ವಸ್ಥ

ಆಂದ್ರಪ್ರದೇಶ: ಉಡುಪು ತಯಾರಿಕಾ ಘಟಕದಲ್ಲಿ ಅನಿಲ ಸೋರಿಕೆಯಾಗಿದ್ದು, 87 ಮಂದಿ ಉಸಿರಾಟದ ತೊಂದರೆಯಿಂದ ಅಸ್ವಸ್ಥಗೊಂಡ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಅಚ್ಯುತಪುರಂ ಜಿಲ್ಲೆಯ ಬ್ರಾಂಡಿಕ್ಸ್ ವಿಶೇಷ ಆರ್ಥಿಕ ವಲಯದ ಉಡುಪು ತಯಾರಿಕಾ ಘಟಕದಲ್ಲಿ ಈ ಅವಘಡ ಸಂಭವಿಸಿದೆ.

ಪ್ರಾರಂಭದಲ್ಲಿ ಕೆಲವು ಮಹಿಳಾ ಉದ್ಯೋಗಿಗಳು ವಾಕರಿಕೆ, ವಾಂತಿ ಕಾಣಿಸಿಕೊಂಡಿದ್ದು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಅಸ್ವಸ್ಥಗೊಂಡ 87 ಮಂದಿಗೆ ಚಿಕಿತ್ಸೆ ನೀಡಲಾಗಿದ್ದು, ಎಲ್ಲರೂ ಆರೋಗ್ಯವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೌಕರರ ಅನಾರೋಗ್ಯಕ್ಕೆ ನಿಜವಾದ ಕಾರಣ ತಿಳಿದುಬಂದಿಲ್ಲ. ಬ್ರಾಂಡಿಕ್ಸ್ ಗಾರ್ಮೆಂಟ್ಸ್ನಲ್ಲಿ ಸಾವಿರಾರು ಕಾರ್ಮಿಕರು ಕೆಲಸ ಮಾಡುತ್ತಿದ್ದು, ಮಹಿಳಾ ಉದ್ಯೋಗಿಗಳೇ ಹೆಚ್ಚಾಗಿದ್ದಾರೆ. ಆದರೆ, ಸದ್ಯ ಪ್ಲಾಂಟ್‌ನಲ್ಲಿ ಗ್ಯಾಸ್ ವಾಸನೆ ಬರುತ್ತಿಲ್ಲ, ಎಪಿಪಿಸಿಬಿ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲಿಸಿದ ಬಳಿಕ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.